ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ತೀವ್ರವಾಗಿ ಕಾಡುತ್ತಿದೆ. ಜನರು ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆ ಕೊರೆತೆ ಇದೆ ಎಂದು ಹೇಳಿದೆ. ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದು ವಿಜ್ಞಾನಿಗಳೇ ಹೇಳುತ್ತಿದ್ದು ಜಿಲ್ಲೆಯ ರೈತರಿಗಾಗಿ ನಾವು ಖಾಸಗಿಯಾಗಿ ಮೋಡ ಬಿತ್ತನೆಯನ್ನ ಮಾಡುತ್ತಿವೆ ಎಂದು ಪ್ರಕಾಶ್ ಕೋಳಿವಾಡ ಹೇಳಿದ್ದಾರೆ.
ಪ್ರಕಾಶ್ ಕೋಳಿವಾಡಗೆ ಅವರಿಗೆ ಸೇರಿದ ಪಿಕೆಕೆ ಎಂಬ ಎನ್ಜಿಒ ಮೋಡ ಬಿತ್ತನೆಗೆ ಜಿಲ್ಲಾಧಿಕಾರಿ ಮತ್ತು ಕಂದಾಯ ಇಲಾಖೆಯಿಂದ ಅನುಮತಿಪಡೆದುಕೊಂಡಿದ್ದು, ಕೇಂದ್ರ ವಿಮಾನಯಾನ ಇಲಾಖೆಯ ಅನುಮತಿ ಪಡೆದುಕೊಳ್ಳಲು ಈ ತಂಡ ಟೀಂ ರಾಜ್ಯ ರಾಜಧಾನಿಗೆ ತೆರಳಿದ್ದು, ದೆಹಲಿಯಲ್ಲಿ ಅನುಮತಿ ದೊರೆತ ಬಳಿಕ ಹಾವೇರಿಯಲ್ಲಿ ಮೋಡ ಬಿತ್ತನೆ ನಡೆಯಲಿದೆ.