ಬೆಂಗಳೂರು: ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಭಾರೀ ಮಳೆಗೆ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ, ಭೂಕುಸಿತ, ಮನೆ-ಬೆಳೆ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿ ಪ್ರದೇಶಕ್ಕೆ ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗ್ತಿದೆ. ನಾಳೆಯಿಂದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಭೇಟಿ ಕೊಡ್ತೀನಿ. ಮಳೆ ಹಾನಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸುತ್ತೇನೆ. ಅಲ್ಲಿನ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ಅಲ್ಲೇ ಸೂಚನೆಗಳನ್ನ ನೀಡುವೆ ಎಂದರು.
ಮಂಗಳವಾರ ಕೊಡಗು ಮತ್ತು ಮಂಗಳೂರಿಗೆ ಭೇಟಿ ಕೊಡುವೆ. ಅಂದು ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡ್ತೀನಿ. ಬುಧವಾರ ಕಾರವಾರ ಜಿಲ್ಲೆಗೆ ಭೇಟಿ ನೀಡ್ತೀನಿ ಎಂದು ಸಿಎಂ ಹೇಳಿದರು.
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…