News Karnataka Kannada
Monday, April 29 2024
ಬೆಂಗಳೂರು ನಗರ

ಮೆಟ್ರೋ ರೈಲಿನಲ್ಲಿ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ: ಜಾಲ ತಾಣದಲ್ಲಿ ಆಕೆ ಹೇಳಿಕೊಂಡಿದ್ಧೇನು?

College Girl Sexually Harassed In Metro Train: What She Said On Website?
Photo Credit : News Kannada

ಬೆಂಗಳೂರು: ಬೆಂಗಳೂರಿನ ಮಾಲ್‌ ಒಂದರಲ್ಲಿ ನಿವೃತ್ತ ಶಿಕ್ಷಕರೊಬ್ಬರು ಯುವತಿಗೆ ಲೈಂಗಿಕ ಕಿರುಕುಳ ನೀಡಿದ  ಪ್ರಕರಣ ಬೆಳಕಿಗೆ ಬಂದಿತ್ತು. ಅಂತಹುದೇ ಪ್ರಕರಣ ಮತ್ತೊಮ್ಮೆ ಬೆಂಗಳೂರಿನ ಮಟ್ರೋ ರೈಲಿನಲ್ಲಿ ನಡೆದಿದೆ. ಜನರಿಂದ ತುಂಬಿ ತುಳುಕುತ್ತಿದ್ದ ಮೆಟ್ರೋ ನಿಲ್ದಾಣದಲ್ಲಿ ದುಷ್ಕರ್ಮಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣ ರೆಡಿಟ್‌ ನಲ್ಲಿ ವಿಚಾರ ಬಹಿರಂಗ ಪಡಿಸಿದ್ದು, ಕೂಡಲೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸೋಮವಾರ ಬೆಳಗ್ಗೆ ಸುಮಾರು 8.30ರ ಸುಮಾರಿನಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನೆಡೆದಿದೆ ಎಂದು ಹೇಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿರುವಂತೆ, ‘ಆಕೆ ನಿತ್ಯ ಕಾಲೇಜಿಗೆ ಬಸ್‌ನಲ್ಲೇ ತೆರಳುತ್ತಿದ್ದಳು. ಆದರೆ, ಅಂದು ಬೆಳಿಗ್ಗೆ 8.30ರ ಸುಮಾರಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೊ ಏರುವಾಗ ದಟ್ಟಣೆಯಿತ್ತು. ರೈಲು ಏರಿದ ಮೇಲೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಮುಂದಕ್ಕೆ ತೆರಳಿ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು