ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ ದುರ್ದೈವಿಗಳು.ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ (ಮಾ.19) ರ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ಸಿಬ್ಬಂದಿ ಮತ್ತು ಸೋಕೋ ಟೀಂ ಭೇಟಿ ನೀಡಿ ಪರಿಶೀಲಿಸಿದ್ದಾರೆ.