ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಮಂಗಳೂರು ದಕ್ಷಿಣದಿಂದ ಜೆ. ಆರ್. ಲೋಬೋ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಪುತ್ತೂರಿನಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ದೊರೆತಿದ್ದು, ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.
ನಿನ್ನೆಯಷ್ಟೆ ಕಾಂಗ್ರೆಸ್ ಸೇರಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಅಥಣಿಯಿಂದ ಟಿಕೆಟ್ ಘೋಷಿಸಲಾಗಿದೆ. ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗಿದ್ದ ಕೋಲಾರದಲ್ಲಿ ಕೊತ್ತನೂರು ಮಂಜುನಾಥ್ಗೆ ಟಿಕೆಟ್ ನೀಡಲಾಗಿದೆ. ಜೆಡಿಎಸ್ನಿಂದ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಅರಸೀಕೆರೆ ಟಿಕೆಟ್ ದೊರೆತಿದೆ. ಮೂಡಿಗೆರೆಯಿಂದ ನಯನಾ ಅವರಿಗೆ ಟಿಕೆಟ್ ನೀಡಲಾಗಿದೆ.