News Karnataka Kannada
Monday, April 29 2024
ಬೆಂಗಳೂರು ನಗರ

ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ ಎಂದ ಸಿ.ಟಿ ರವಿ

CT Ravi said that if we speak anything now, our words will turn us back
Photo Credit : News Kannada

ದೇವನಹಳ್ಳಿ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿಎಸ್​ವೈ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಬದಲಾಗದಿರುವುದು ಕಾರ್ಯಕರ್ತ ಅನ್ನೋದು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 35 ವರ್ಷಗಳ ರಾಜಕೀಯ ಜೀವನದಲ್ಲಿ ಬಹಳಷ್ಟು ವಿಷಯ ಮಾತಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ. ಪಕ್ಷ ನೇಮಕ ಮಾಡಿದೆ, ಇನ್ನೇನಿದ್ರೂ ಪಕ್ಷ ಕಟ್ಟಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿ.ಟಿ.ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಮಧ್ಯಪ್ರದೇಶದಿಂದ ಆಗಮಿಸಿದ ಸಿ.ಟಿ. ರವಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾದ್ಯಮಗಳಿಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಸಂಬಂಧ ಪ್ರತಿಕ್ರಿಯೆ ನೀಡಿದರು. ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ ಯಶಸ್ವಿಯಾಗಲಿ. ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು