ಬೆಂಗಳೂರು: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಯಲಹಂಕದ ಎಲ್ಬಿಎಸ್ ಲೇಔಟ್ನಲ್ಲಿ ಸಂಭವಿಸಿದೆ.
ಸದ್ಯ ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ.
ಈ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.