ಬೆಂಗಳೂರು; ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ- ಜಿ. ಹನುಮಂತಪ್ಪ

ಬೆಂಗಳೂರು; ನಿಶ್ಚಿತ ಪಿಂಚಣಿ (ಹಳೇ ಪಿಂಚಣಿ ಯೋಜನೆ) ಮತ್ತು ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಅನುದಾನಿತ ಶಾಲಾ, ಕಾಲೇಜು ನೌಕರರಿಗೆ ಜಾರಿಗೊಳಿಸುವಂತೆ ಆಗ್ರಹಿಸಿ ಪಿಂಚಣಿ ವಂಚಿತ ನೌಕರರ ಸಂಘ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಮುಷ್ಕರ (ಫೆ.20ಕ್ಕೆ) 135 ದಿನ ತಲುಪಲಿದ್ದು, ಬಜೆಟ್ ನಲ್ಲಿ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಸೋಮವಾರ (ಫೆ.20) ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ನಂತರ ಅಹೋರಾತ್ರಿ ಅಮರಣಾಂತ ಉಪವಾಸ ನಡೆಸಲು ನಿರ್ಧರಿಸಿದೆ.

ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಸಂಘದ ರಾಜ್ಯಾಧ್ಯಕ್ಷ ಜಿ. ಹನುಮಂತಪ್ಪ, ನಮ್ಮ ಹೋರಾಟ, ಮನವಿಗಳಿಗೆ ಸರ್ಕಾರ ಕಿಂಚಿತ್ತೂ ಮನ್ನಣೆ ನೀಡಿಲ್ಲ. ನಮ್ಮ ಯಾವುದೇ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಈ ನಿರ್ಲಕ್ಷ್ಯ ಧೋರಣೆ ವಿರುದ್ಧ ಫೆ.20 ರಂದು ಸಹಸ್ರಾರು ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದರು.

ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸಬಹುದು. ಬಜೆಟ್ ನಲ್ಲಿ ಸೂಕ್ತ ಪರಿಹಾರ ದೊರೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಅಕ್ಟೋಬರ್ 7 ರಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, 2006, ಏಪ್ರಿಲ್ 1ಕ್ಕೂ ಮುನ್ನ ನೇಮಕವಾದವರನ್ನು ಪಿಂಚಣಿ ವ್ಯವಸ್ಥೆಗೆ ಪರಿಗಣಿಸಿ, ನಿವೃತ್ತಿಯಾದ ದಿನಾಂಕದಂದು ವೇತನಕ್ಕೆ ಅನುಗುಣವಾಗಿ “ಹಳೆಯ ನಿಶ್ಚಿತ ಪಿಂಚಣಿ” ಯೋಜನೆ ನೀಡಬೇಕು. ಈಗಾಗಲೇ  ನಿವೃತ್ತಿ ಹಾಗೂ ನಿಧನ ಹೊಂದಿದ ಕುಟುಂಬಗಳಿಗೆ ಈ ಸೌಲಭ್ಯವನ್ನು ಕೂಡಲೇ ಜಾರಿಗೆ ತರಬೇಕು. ಸರ್ಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಮತ್ತಿತರ ವೈದ್ಯಕೀಯ ಸೌಲಭ್ಯ ಗಳನ್ನು ತಾರತಮ್ಯ ಇಲ್ಲದೇ ಅನುದಾನಿತ ನೌಕರರಿಗೂ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದರು.

ನಮ್ಮ ಪ್ರಾಮಾಣಿಕ ಮತ್ತು ಶಾಂತಿಯುತ ಹೋರಾಟವನ್ನು ಅಂತಃಕರಣದಿಂದ ಈಡೇರಿಸುವ ನಿಟ್ಟಿನಲ್ಲಿ ಕಾಳಜಿ ತೋರುತ್ತಿಲ್ಲ. ಸರಕಾರದ ಘೋರ ಅನ್ಯಾಯ ಖಂಡಿಸಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದೇವೆ. “ಅನುದಾನಿತ ಪಿಂಚಣಿ ವಂಚಿತ ನೌಕರರ ನಡೆ ಬೆಂಗಳೂರು ಫ್ರೀಡಂ ಪಾರ್ಕ್ ಕಡೆ” ಎಂಬ ಘೋಷ ವಾಕ್ಯದೊಂದಿಗೆ ಹೋರಾಟ ಆರಂಭಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಪಿಂಚಣಿ ಸೌಲಭ್ಯ ದೊರೆಯದೇ ಈಗಾಗಲೇ ಸುಮಾರು 3000ಕ್ಕೂ ಹೆಚ್ಚು ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಬರಿಗೈಯಲ್ಲಿ ನಿವೃತ್ತಿಯಾಗಿದ್ದಾರೆ. ಅನೇಕರು ಸೇವೆಯಲ್ಲಿರುವಾಗಲೇ ಮರಣಹೊಂದಿದ್ದು, ಹನ್ನೆರಡು ವರ್ಷಗಳ ಹೋರಾಟಕ್ಕೆ ಯಾವುದೇ ಮನ್ನಣೆ ನೀಡುತ್ತಿಲ್ಲ ಎಂದು ಜಿ. ಹನುಮಂತಪ್ಪ ಅಸಮಧಾನ ವ್ಯಕ್ತಪಡಿಸಿದ್ದಾರೆ.

Sneha Gowda

Recent Posts

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

7 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

22 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

36 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

37 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

1 hour ago