News Karnataka Kannada
Friday, May 10 2024
ಬೆಂಗಳೂರು ನಗರ

ಪತ್ರಕರ್ತರ ನಿಯೋಗದಿಂದ ಸಿಎಂ ಭೇಟಿ: ಮನವಿ ಸಲ್ಲಿಕೆ

Delegation of journalists meets CM, submits memorandum
Photo Credit : News Kannada

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಸೋಮವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿ ಗಾಗಿ 500 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದ ಸಲ್ಲಿಸಲಾಯಿತು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ, ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು, ಮನವಿ ಅರ್ಪಿಸಲಾಯಿತು.

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ತಾರತಮ್ಯ ಇಲ್ಲದಂತೆ ಜಾಹಿರಾತು ಬಿಡುಗಡೆ, ಬಾಕಿ ಬಿಲ್ ಮಂಜೂರು ಹಾಗೂ ಪ್ರೋತ್ಸಾಹದಾಯಕ ಜಾಹೀರಾತುಗಳಿಗೆ ಆಯವ್ಯಯದಲ್ಲಿ ಅನುದಾನ ಮೀಸಲಿಡಲು ಕೋರಲಾಯಿತು. ಮನವಿಯಲ್ಲಿನ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಜಿಲ್ಲಾ ಪದಾಧಿಕಾರಿಗಳಾದ ದಿನೇಶ್ ಗೌಡಗೆರೆ, ಶಿವಕುಮಾರ ಸ್ವಾಮಿ, ಚಲುವರಾಜು, ಸಿ.ಎನ್.ಕುಮಾರ್, ಸೋಮಶೇಖರ ಗಾಂಧಿ, ಜುಕ್ರಿಯಾ, ರಾಜು, ರಾಯಚೂರು ವೀರಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು