News Karnataka Kannada
Sunday, May 12 2024
ಸಾಂಡಲ್ ವುಡ್

ನಿರ್ದೇಶಕ ಟಿ.ಎಸ್ ನಾಗಾಭರಣಗೆ ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್

Director TS Nagabharana conferred honorary doctorate by Tumkur University
Photo Credit : News Kannada

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ನಾಗಾಭರಣ ಅವರಿಗೆ ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಲಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ಸಂತ ಶಿಶುನಾಳ ಶರೀಫ, ಚಿನ್ನಾರಿ ಮುತ್ತ, ನಾಗಮಂಡಲ, ಸಿಂಗಾರೆವ್ವ, ಕಲ್ಲರಳಿ ಹೂವಾಗಿ, ಅಲ್ಲಮ ಮುಂತಾದ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ನಾಗಾಭರಣ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ. ಕನ್ನಡ ಸಿನಿಮಾ, ರಂಗಭೂಮಿಗೆ ವಿಶಿಷ್ಟಕೊಡುಗೆ ನೀಡುತ್ತಿರುವ ಟಿ. ಎಸ್. ನಾಗಾಭರಣ ಅವರು 35ಕ್ಕಿಂತ ಹೆಚ್ಚು ಸಿನಿಮಾಗಳ ನಿರ್ದೇಶನ ಮಾಡಿದ್ದಾರೆ.

ತುಮಕೂರು ವಿವಿ ವತಿಯಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿಯ ಶಿಫಾರಸ್ಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆಗಸ್ಟ್ 7ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋತ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು