ಪ್ರಮಾಣವಚನ ಸಮಾರಂಭಕ್ಕೆ ಗೈರಾದ ಅತೃಪ್ತರು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಸಂಪುಟ ರಚನೆಯ ವಿಚಾರದಲ್ಲಿ ಸರ್ಕಾರದ ವಿರುದ್ಧ ಅಸಮಾಧಾನ ಕೇಳಿಬಂದಿದ್ದು ಹಲವರು ಪ್ರಮಾಣವಚನ ಸಮಾರಂಭಕ್ಕೆ ಗೈರಾಗಿದ್ದಾರೆ.

ಸಿದ್ದರಾಮಯ್ಯ ಕ್ಯಾಂಪ್​​ನಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್, ಬಸವರಾಜ ರಾಯರೆಡ್ಡಿ, ಸಂತೋಷ್ ಲಾಡ್, ಶಿವರಾಜ್ ತಂಗಡಗಿ ಕಾರ್ಯಕ್ರಮದಲ್ಲಿ ಎಲ್ಲಿಯೂ ಕಾಣಲಿಲ್ಲ.

ಇನ್ನು ಸಿದ್ದು ಆಪ್ತರಾದ ಕೆ.ಎನ್ ರಾಜಣ್ಣ, ಸಿದ್ದು ಶಿಷ್ಯ ಭೈರತಿ ಸುರೇಶ್, ರಾಘವೇಂದ್ರ ಹಿಟ್ನಾಳ್, ತುಕಾರಾಮ್, ರಿಜ್ವಾನ್ ಅರ್ಷದ್ ಸೇರಿ ಹಲವು ಶಾಸಕರು ಕಾರ್ಯಕ್ರಮ ವೇದಿಕೆಯಲ್ಲಿ ಕಂಡು ಬರಲಿಲ್ಲ. ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆ ಬೇಸರಗೊಂಡ ಮಧು ಬಂಗಾರಪ್ಪ ಕೂಡ ಕಾರ್ಯಕ್ರಮದಿಂದ ದೂರ ಉಳಿದಿರುವುದು ಕಂಡು ಬಂದಿತ್ತು.

ಈ ಮಧ್ಯೆ, ಬುಧವಾರದ ಬಳಿಕ ಅಂದರೆ ಮೂರ ದಿನಗಳ ವಿಶೇಷ ಅಧಿವೇಶನದ ಬಳಿಕ ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಈ ಸಂದರ್ಭದಲ್ಲಿ ಸಂಪುಟ ರಚನೆ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

Gayathri SG

Recent Posts

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

8 mins ago

ಸಿಡಿಲು ಬಡಿದು 10 ದಿನದ ಹಿಂದೆ ಮದುವೆಯಾಗಿದ್ದ ಯುವಕ ಮೃತ್ಯು

ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ…

24 mins ago

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

8 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

8 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

9 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

9 hours ago