ಡಿ.ಕೆ. ಶಿವಕುಮಾರ್‌ ಬಳಿ ವಲಸೆ ಬರುವ 42 ಮಂದಿಯ ಪಟ್ಟಿಯಿದೆ: ಬಾಂಬ್‌ ಸಿಡಿಸಿದ ಶೆಟ್ಟರ್‌

ಬೆಂಗಳೂರು: ಬಿಜೆಪಿಯಿಂದ ಕಾಂಗ್ರೆಸ್‌ ಗೆ ವಲಸೆ ಬರುವವರಿಗೆ ಸಂಪರ್ಕ ಸೇತುವಾಗಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಾರ್ಯನಿರ್ವಹಿಸುತ್ತಿದ್ದಾರೆ. ಆಪರೇಷನ್ ಹಸ್ತದ ವಿಚಾರವಾಗಿ ಕಾಂಗ್ರೆಸ್ ಎಂಎಲ್​ಸಿ ಜಗದೀಶ ಶೆಟ್ಟರ್ ಮತ್ತೆ ಸುಳಿವು ನೀಡಿದ್ದು, ಡಿಸಿಎಂ ಡಿಕೆ ಶಿವಕುಮಾರ್​ ಬಳಿ 42 ಜನರ ಲಿಸ್ಟ್ ಇದೆ ಎಂದು ಮಂಗಳವಾರ ಹೇಳಿದ್ದಾರೆ.

ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್​ಗೆ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ, ಡಿಸಿಎಂಗೆ ನನ್ನನ್ನು ಭೇಟಿ ಮಾಡಿದವರ ಮಾಹಿತಿ ನೀಡಿದ್ದೇನೆ. ನನ್ನ ಕಡೆ ಬಂದವರನ್ನು ನಾಯಕರಿಗೆ ಪರಿಚಯ ಮಾಡಿಸ್ತೇನೆ ಅಷ್ಟೇ. ನನ್ನನ್ನು ಹಾಲಿ ಶಾಸಕರು ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ.

ಆಪರೇಷನ್ ಹಸ್ತಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದಲೂ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈ ಮಧ್ಯೆ, ನಾವು ಯಾರನ್ನೂ ಸೆಳೆಯುತ್ತಿಲ್ಲ, ತಾವಾಗಿ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ನೀಡಿದ್ದರು. ಆದರೆ, ಇದೀಗ ಡಿಕೆ ಶಿವಕುಮಾರ್ ಬಳಿ 42 ಜನರ ಪಟ್ಟಿ ಇದೆ ಎನ್ನುವ ಮೂಲಕ ಶೆಟ್ಟರ್ ಅವರು ಬಹಿರಂಗವಾಗಿ ಆಪರೇಷನ್ ಹಸ್ತದ ಬಗ್ಗೆ ಸುಳಿವು ನೀಡಿದಂತಾಗಿದೆ.

ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿಯಲ್ಲಿ ಇರುವವರು ಸತ್ಯಹರಿಶ್ಚಂದ್ರರಾ ಎಂದು ಪ್ರಶ್ನಿಸಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹತ್ತಾರು ಹಗರಣಗಳ ಬಗ್ಗೆ ಕೇಳಿ ಬಂತು. ಇವರ ಹೇಳಿಕೆಯಿಂದ ಇಡೀ ರಾಜಕೀಯ ಅಸಹ್ಯ ಪಡುವಂತೆ ಆಗುತ್ತಿದೆ. ತಾವು ಸತ್ಯಹರಿಶ್ಚಂದ್ರರು ಎಂದು ಬಿಜೆಪಿಯವರು ಹೇಳಲಿ ನೋಡೋಣ ಎಂದು ಶೆಟ್ಟರ್ ಸವಾಲು ಹಾಕಿದ್ದಾರೆ.

Gayathri SG

Recent Posts

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

2 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

17 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

38 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago