ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಅದರಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಬಹುಮತ ಪಡೆದಿದ್ದರೂ ಮುಖ್ಯಮಂತ್ರಿ ಹುದ್ದೆಗೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂದಿನ ಸಭೆ ಪ್ರಾಮುಖ್ಯತೆ ಪಡೆದಿದೆ.
ದೆಹಲಿಗೆ ಡಿ.ಕೆ ಶಿವಕುಮಾರ್, ಇಂದು ಅಂತಿಮ ತೀರ್ಮಾನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.