News Karnataka Kannada
Saturday, May 04 2024
ಬೆಂಗಳೂರು ನಗರ

ಬೆಂಗಳೂರು: ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು- ಡಿ.ಕೆ.ಶಿ

The time has come to see a Vokkaliga as the next CM says KPCC president DKSHI
Photo Credit : News Kannada

ಬೆಂಗಳೂರು: ‘ಬಿಜೆಪಿಯವರು ಸರ್ಕಾರ ಇದೆ ಎಂದು ಚುನಾವಣಾ ಬಾಂಡ್ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ. ಆದರೆ ನಮಗೆ ಬಾಂಡ್ ಕೊಡುವವರಿಲ್ಲ. ಹೀಗಾಗಿ ಪಕ್ಷದ ಸಂಘಟನೆಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಯಲಹಂಕದ ಗೋಲ್ಡ್ ಫಿಂಚ್ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಅವರು ಉತ್ತರಿಸಿದರು.

‘ಬಿಜೆಪಿಯವರು ಏನಾದರೂ ಟೀಕೆ ಮಾಡಲಿ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ಹಾಗೂ ಅರ್ಜಿ ಸಲ್ಲಿಸುವಾಗ 2 ಲಕ್ಷ, 1 ಲಕ್ಷ ರು. ಡಿಡಿ ಪಡೆದರೆ ಬಿಜೆಪಿಯವರಿಗೇನು ನೋವು’ ಎಂದರು.

ನಿಮ್ಮ ಪಕ್ಷದ ಕಾರ್ಯಕರ್ತರೇ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಎಂಬ ಪ್ರಶ್ನೆಗೆ, ‘ನನ್ನ ಬಳಿ ಯಾರೂ ಕೂಡ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ, ಅವರು ಪಕ್ಷ ತೊರೆಯಬಹುದು. ಪಕ್ಷದ ವತಿಯಿಂದ ಎಲ್ಲರನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರ. ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು? ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?’ ಎಂದು ಖಾರವಾಗಿ ಪ್ರಶ್ನಿಸಿದರು.

ರೇಣುಕಾಚಾರ್ಯ ಅವರ ಸಹೋದರನ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, ‘ಈ ವಿಚಾರವನ್ನು ನಾನು ಮಾಧ್ಯಮಗಳಲ್ಲಿ ನೋಡಿದೆ. ಇಂತಹ ಘಟನೆ ಆಗಬಾರದಿತ್ತು, ಆಗಿಹೋಗಿದೆ. ಈ ರೀತಿ ಹೇಗೆ ಆಯಿತು ಎಂದು ಎಲ್ಲರಿಗೂ ಅನುಮಾನ ಬರುತ್ತದೆ. ಸರ್ಕಾರ ಈ ಬಗ್ಗೆ ತನಿಖೆ ಮಾಡಿ ನ್ಯಾಯ ಒದಗಿಸಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಧೈರ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದರು.

ಕಾಂಗ್ರೆಸ್ ಬಾಗಿಲು ಕ್ಲೋಸ್ ಆಗಲಿದೆ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಕಾಂಗ್ರೆಸ್ ಬಾಗಿಲು ಮುಚ್ಚುವುದಾದರೆ, ಅವರು ಕಾಂಗ್ರೆಸ್ ಶಾಸಕರನ್ನು ಕಾಡಿ ಬೇಡಿ, ಕಾಲಿಗೆ ಬಿದ್ದು, ಹಣ ಕೊಟ್ಟು ಖರೀದಿ ಮಾಡಿದರಲ್ಲ, ನಮ್ಮ ಪಕ್ಷದ 13 ಹಾಗೂ ಜೆಡಿಎಸ್ ನ 3 ಸದಸ್ಯರನ್ನು ಕರೆದುಕೊಂಡರಲ್ಲ, ಆಗೇನು ಅವರ ಪಕ್ಷದ ಬಾಗಿಲು ಬಂದ್ ಆಗಿತ್ತಾ? ಅವರಿಗೆ ತಾಕತ್ತಿದ್ದರೆ ಜನಮತದ ಆಧಾರದ ಮೇಲೆ ಗೆಲ್ಲಬೇಕಿತ್ತು. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ’ ಎಂದು ಕಿಡಿಕಾರಿದರು.

ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದ ಬ್ರ್ಯಾಂಡ್ ಎಂಬ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ನನ್ನನ್ನು ಟಾರ್ಗೆಟ್ ಮಾಡಿದರೆ ಅವರಿಗೆ ಮಾರ್ಕೆಟ್ ಇರುತ್ತದೆ’ ಎಂದರು.

ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ‘ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಹೇಳಿಕೆಗೆ ಕಾಲವೇ ಉತ್ತರ ನೀಡಲಿದೆ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು