ಬೆಂಗಳೂರು: ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿಯಾ, ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ ಇದ್ದಾನೆ. ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ನನ್ನ ಹೆಸರಲ್ಲಿ ಶಿವನ ಮಗ ಕುಮಾರನೂ ಇದ್ದಾನೆ. ಬಿಜೆಪಿಯವರಿಗೆ ಹೊಟ್ಟೆ ಉರಿ ಎಂದು ಹೇಳಿದರು.
ಬಿಜೆಪಿಯವರು ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ದೇಗುಲಗಳಲ್ಲಿ ಪೂಜೆ ಮಾಡುವಂತೆ ನಾವು ಆದೇಶ ಮಾಡಿಲ್ವಾ? ಮುಜರಾಯಿ ಇಲಾಖೆ ದೇಗುಲಗಳಿಗೆ ಆದೇಶಿಸಿಲ್ವಾ? ರಾಮನನ್ನೂ ಪೂಜಿಸುತ್ತೇವೆ, ಸೀತೆಯನ್ನೂ ಪೂಜಿಸುತ್ತೇವೆ ಎಂದರು.