News Karnataka Kannada
Thursday, May 02 2024
ಬೆಂಗಳೂರು ನಗರ

ಟೊಮೆಟೊ ತುಂಬಿದ ಪಿಕಪ್‌ ಕದ್ದವರು ಅಂದರ್‌: ಖದೀಮರು ತರಕಾರಿ ಮಾರಿದ್ದೆಲ್ಲಿ ಗೊತ್ತಾ

Do you know where the thieves sold vegetables?
Photo Credit : News Kannada

ಬೆಂಗಳೂರು: ಈಗ ಎಲ್ಲಿ ನೋಡಿದರೂ ಟೊಮೆಟೊದ್ದೇ ಮಾತು. ಟೊಮೆಟೊ ದರದೊಂದಿಗೆ ಟೊಮೆಟೊ ಕಳ್ಳತನ ಪ್ರಕರಣಗಳ ಸಂಖ್ಯೆಯೋ ಅದೇ ವೇಗದಲ್ಲಿ ಸಾಗುತ್ತಿದೆ.

ಕೆಲದಿನಗಳ ಹಿಂದೆ ಅಂದರೆ ಜುಲೈ 8 ರಂದು ಬೆಂಗಳೂರಿನ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಬಳಿ ಸುಮಾರು 2 ಸಾವಿರ ಕೆ.ಜಿ ಗೂ ಅಧಿಕ ಟೊಮೆಟೊ ಇದ್ದ ಬೊಲೆರೋ ವಾಹನವನ್ನ ಖದೀಮರು ಕಳ್ಳತನ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಮಿಳುನಾಡು ಮೂಲದ ಭಾಸ್ಕರ್, ಸಿಂಧೂಜಾ ಎಂಬ ಆರೋಪಿಗಳನ್ನು ಆರ್​ಎಂಸಿ ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡ ಇನ್ನೂ ಮೂವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಜುಲೈ 8 ಶನಿವಾರದಂದು ರೈತರೊಬ್ಬರು ಅಂದಾಜು 3 ಲಕ್ಷ ಮೌಲ್ಯದ ಟೊಮೆಟೊವನ್ನು ಬೊಲೆರೋದಲ್ಲಿ ತುಂಬಿಕೊಂಡು ಹಿರಿಯೂರಿನಿಂದ ಕೋಲಾರಕ್ಕೆ ಸಾಗಿಸುತ್ತಿದ್ದರು. ಇದನ್ನು ಗಮನಿಸಿದ ಮೂವರು ಅಪರಿಚಿತರು ಕಾರಿನಲ್ಲಿ ಬೊಲೆರೋ ವಾಹನವನ್ನ ಹಿಂಬಾಲಿಸಿಕೊಂಡು ಬಂದಿದ್ದಾರೆ. ಬಳಿಕ ಆರ್​ಸಿಎಂ ಯಾರ್ಡ್​ ಠಾಣೆಯ ವ್ಯಾಪ್ತಿಯಲ್ಲಿ ಅಡ್ಡಗಟ್ಟಿ, ನಿಮ್ಮ ವಾಹನದಿಂದ ನಮ್ಮ ಕಾರಿಗೆ ಟಚ್​ ಮಾಡಿದ್ದೀರಿ ಎಂದು ನಾಟಕವಾಡಿ, ರೈತ ಮತ್ತು ಬೊಲೆರೋ ಚಾಲಕನಿಗೆ ಹಲ್ಲೆ ಮಾಡಿ, ಬೊಲೆರೋವನ್ನ ತೆಗೆದುಕೊಂಡು ಎಸ್ಕೇಪ್​ ಆಗಿದ್ದರು. ಈ ಕುರಿತು ರೈತರು ಠಾಣೆಗೆ ದೂರು ದಾಖಲಿಸಿದ್ದರು.

ಇನ್ನು ಟೊಮೆಟೊ ತುಂಬಿದ ಬೊಲೆರೋ ಕಳ್ಳತನ ಮಾಡಿದ ಖದೀಮರು, ತಮ್ಮ ನಿವಾಸದಲ್ಲಿ ಕೂತು ಪ್ಲ್ಯಾನ್ ಮಾಡಿ ಬಳಿಕ ಚೆನ್ನೈ ಮಾರುಕಟ್ಟೆಗೆ ಹೋಗಿ ಟೊಮೆಟೊವನ್ನ ಮಾರಾಟ ಮಾಡಿದ್ದಾರೆ. ನಂತರ ಖಾಲಿ ವಾಹನವನ್ನು ತಂದು ನಿಲ್ಲಿಸಿ ಪರಾರಿಯಾಗಿದ್ದರು. ಇದೀಗ ಆರ್​ಎಂಸಿ ಯಾರ್ಡ್​ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದ ಮೂವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು