ಪ್ರಧಾನಿ ಮೆಚ್ಚುಗೆಗೆ ಪಾತ್ರವಾದ ಬೆಂಗಳೂರಿನ ಆ ಕಟ್ಟಡ ಯಾವುದು ಗೊತ್ತಾ?

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಯುನೆಸ್ಕೋದ ವಿಶೇಷ ವಿಶ್ವ ಮನ್ನಣೆ ಸಿಕ್ಕಿದೆ. ಇದಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ‌ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಜಗತ್ತಿನ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಇದೂ ಒಂದು ಎಂಬ ಕೀರ್ತಿಗೆ ನಮ್ಮ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾಜನವಾಗಿದೆ ಎಂದು ಕಳೆದ ವರ್ಷ ಟರ್ಮಿನಲ್ ಕಟ್ಟಡ ಉದ್ಘಾಟನೆಯ ಫೋಟೋಗಳನ್ನ ಶೇರ್‌ ಮಾಡಿ ಮೋದಿ ಹರ್ಷವನ್ನ ವ್ಯಕ್ತಪಡಿಸಿದ್ದಾರೆ. ಉತ್ಸಾಹಭರಿತ ನಗರದ ಜೊತೆಗೆ ವಾಸ್ತುಶಿಲ್ಪದಲ್ಲಿ ತನ್ನ ಜಾಣ್ಮೆಯನ್ನ ಇಲ್ಲಿ ತೋರಿಸಲಾಗಿದೆ. ಇದು ಭಾರತಕ್ಕೆ ಹೆಮ್ಮೆ ಎಂದು ಪ್ರಧಾನಿಗಳು ಶ್ಲಾಘಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಕೇವಲ ರೋಮಾಂಚಕ ನಗರವಾದ ಬೆಂಗಳೂರಿನ ಹೆಬ್ಬಾಗಿಲು ಮಾತ್ರವಲ್ಲದೆ, ವಾಸ್ತುಶಿಲ್ಪದ ವೈಭವದ ಪ್ರದರ್ಶನವಾಗಿದೆ. ಈ ಸಾಧನೆಯು ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಕಲಾತ್ಮಕ ಸೌಂದರ್ಯದೊಂದಿಗೆ ಸಂಯೋಜಿಸುವಲ್ಲಿ ದೇಶದ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಕಳೆದ ವರ್ಷ ಟರ್ಮಿನಲ್ ಕಟ್ಟಡದ ಉದ್ಘಾಟನೆಯ ಝಲಕ್ ಇಲ್ಲಿದೆ’ ಎಂದು ಪ್ರಧಾನಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

14 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

15 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

36 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

46 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

48 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

59 mins ago