ಬೆಂಗಳೂರು ನಗರ

ವಿಧಾನಸೌಧ ಸುತ್ತಮುತ್ತ ಡ್ರೋನ್‌ ಹಾರಾಟ: ಇಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಬೆಳಗ್ಗೆ 6.45ರ ಸುಮಾರಿಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಅರುಣ್​ ಮತ್ತು ವಿನೋದ್ ವಶಕ್ಕೆ ಪಡೆಯಲಾಗಿದ್ದ ಯುವಕರು. ಸದ್ಯ ಇಬ್ಬರಿಗೂ ಸ್ಟೇಷನ್​ ಬೇಲ್​​ ನೀಡಿ ಕಳುಹಿಸಲಾಗಿದೆ. ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ ವಿಚಾರ ತಿಳಿಯದೆ ಹಾರಿಸಲು ಯತ್ನಿಸಿದ್ದಾಗಿ ಪೊಲೀಸ್​​ ವಿಚಾರಣೆಯಲ್ಲಿ ತಿಳಿದುಬಂದಿದೆ. ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಧಾನಸೌಧದ ವಿಡಿಯೋ ಚಿತ್ರೀಕರಣಕ್ಕೆ ಬಂದಿದ್ದರು.

50 ಗ್ರಾಂ ಗಿಂತ ಕಡಿಮೆ ಅಥವಾ ಸಮ ತೂಕದ (ಯಾವುದೇ ಪರವಾನಗಿ ಅಗತ್ಯವಿಲ್ಲದ) ನ್ಯಾನೊ ಡ್ರೋನ್​ನನ್ನು ನೆಲದಿಂದ 50 ಅಡಿಗಿಂತ ಹೆಚ್ಚು ಅಂತರದಲ್ಲಿ ಹಾರಾಟ ನಡೆಸಬಹುದಾ ಎಂದು ಮೊದಲು ಖಚಿತಪಡಿಸಿಕೊಳ್ಳಬೇಕು. ಅದೇ ರೀತಿಯಾಗಿ ನೀವು ವಿಮಾನ ನಿಲ್ದಾಣ ಅಥವಾ ಇತರೆ ಸೂಕ್ಷ್ಮ ನಿಯಂತ್ರಿತ ಪ್ರದೇಶಗಳಲ್ಲಿ ನ್ಯಾನೊ ಡ್ರೋನ್​ಗಳನ್ನು ಹಾರಾಟ ನಡೆಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ ಎಂದು ರಕ್ಷಣಾ ವಿಶ್ಲೇಷಕ ಗಿರೀಶ್​ ಲಿಂಗಣ್ಣ ಅವರು ಅಭಿಪ್ರಾಯ ಪಟ್ಟಿದ್ದಾರೆ.

Gayathri SG

Recent Posts

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

13 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

24 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

39 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

56 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

2 hours ago