News Karnataka Kannada
Monday, April 29 2024
ಬೆಂಗಳೂರು ನಗರ

ಡಿವಿ ಸದಾನಂದಗೌಡರನ್ನು ಸಂಪರ್ಕಿಸಿದ ಬಿಜೆಪಿ ಹೈಕಮಾಂಡ್

ಡಿವಿ ಸದಾನಂದಗೌಡ
Photo Credit : NewsKarnataka

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಫರ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಡಿವಿ ಸದಾನಂದಗೌಡರನ್ನು ಸಂಪರ್ಕಿಸಿದ ಬಿಜೆಪಿ ಹೈಕಮಾಂಡ್ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಬಗ್ಗೆ ಆಫರ್ ನೀಡಿದ್ದರು ಎನ್ನಲಾಗಿದೆ. ಆದರೆ, ಸದಾನಂದಗೌಡ ಅವರು ಸಮ್ಮತಿ ಸೂಚಿಸಿಲ್ಲ. ಇನ್ನೊಂದೆಡೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಗೆ ತೆರಳುವ ಮುನ್ನ ಸದಾನಂದಗೌಡರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರು ಎನ್ನಲಾಗುತ್ತಿದೆ.

ಡಿ.ವಿ. ಸದಾನಂದಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಫರ್ ನೀಡಿದೆಯಾದರೂ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಸುತ್ತಿದ್ದಾರೆ. ಹೌದು, ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್​ಆರ್ ವಿಶ್ವನಾಥ್ ನಡುವೆ ಪೈಪೋಟಿ ನಡೆಯುತ್ತಿದೆ. ಟಿಕೆಟ್ ಸಿಗುವ ವಿಶ್ವಾಸದಲ್ಲಿರುವ ಸುಧಾಕರ್, ಟಿಕೆಟ್ ಘೋಷಣೆಗೂ ಮುನ್ನ ಚುನಾವಣೆಯಲ್ಲಿ ತನ್ನನ್ನು ಗೆಲ್ಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಳ್ಳುತ್ತಿರುವ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು