ಬೆಂಗಳೂರು ನಗರ

ರಾಜ್ಯದಲ್ಲಿ ಇಡಿ ಭರ್ಜರಿ ಬೇಟೆ; ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ..!

ಬೆಂಗಳೂರು: ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಆಸ್ತಿ ಮತ್ತು ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ.

ಭಾರತ್​ ಇನ್ಫ್ರಾ ಎಕ್ಸ್​ಪೋರ್ಟ್​​ ಆ್ಯಂಡ್ ಇಂಪೋರ್ಟ್​​ ಲಿಮಿಟೆಡ್​ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಭಾರತ್​ ಇನ್ಫ್ರಾ ಎಕ್ಸ್​ಪೋರ್ಟ್​​ ಆ್ಯಂಡ್ ಇಂಪೋರ್ಟ್​​ ಲಿಮಿಟೆಡ್​ ವಿರುದ್ಧ ಬ್ಯಾಂಕ್​​ಗೆ ವಂಚನೆ ಪ್ರಕರಣ ಸಂಬಂಧ ಎರಡು ಜಿಲ್ಲೆಗಳಲ್ಲಿ ಏಳು ಕಡೆ ಇಡಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 100 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ, 14 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ಈ ವೇಳೆ ಅಧಿಕಾರಿಗಳು ಹಲವು ದಾಖಲೆಗಳು ಹಾಗೂ ಡಿಜಿಟಲ್ ಡಿವೈಸ್​​ಗಳನ್ನೂ ವಶಪಡಿಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬ್ಯಾಂಕ್‌ ಖಾತೆ ಮಾಹಿತಿ ಸಂಗ್ರಹಿಸಿ ಖಾತೆಯನ್ನು ಜಪ್ತಿ ಮಾಡಿ ಅನಧಿಕೃತ ಸಂಪತ್ತಿನ ಮೂಲವನ್ನು ಹುಡುಕುತ್ತಿದ್ದಾರೆ ಎಂದು ತಿಳಿದುಬಂದಿದೆ.

Sneha Gowda

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

12 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

22 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

35 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago