ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಕ್ಕೆ ಬಿಎಮ್ಟಿಸಿ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಗಂಗಾಧರ್ (21) ಮೃತ ದುರ್ದೈವಿ. ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಗಾಧರ್ಗೆ ಹಿಂಬಂದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂಬದಿ ಚಕ್ರ ಹರಿದು ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತ ಎಸಗಿದ್ದ ಬಿಎಮ್ಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ವಿದ್ಯಾರ್ಥಿ ಮೃತದೇಹ ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.