ಪೊಲೀಸರಿಂದ ತಪ್ಪಿಸಿಕೊಳ್ಳಲು ಪರದಾಟ: ನಾಲ್ಕನೆ ಮಹಡಿಯಿಂದ ಅರೆಬೆತ್ತಲಾಗಿ ಜಿಗಿದು ಪ್ರಾಣಬಿಟ್ಟ

ಬೆಂಗಳೂರು: ಪ್ರಕರಣವೊಂದರಲ್ಲಿ ಬಂಧಿಸಲು ಹೋದಾಗ ಪೊಲೀಸರ ಕಂಡ ಯುವಕನೊಬ್ಬ ತಪ್ಪಿಸಿಕೊಳ್ಳುವ ಭರದಲ್ಲಿ ನಾಲ್ಕನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೊಮ್ಮನಹಳ್ಳಿ ನಿವಾಸಿ ಮೊಹಮ್ಮದ್‌ ಹುಸೇನ್‌(31) ಮೃತ ಯುವಕ. ಮೊಹಮ್ಮದ್‌ ಹುಸೇನ್‌ ವಿರುದ್ಧ ಸ್ಥಳೀಯ ಯುವತಿಗೆ ಬೆದರಿಕೆ ಹಾಕಿದ ಆರೋಪ ಸಂಬಂಧ ಆಕೆಯ ಪೋಷಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿರುವ ಮನೆಯಲ್ಲಿ ಆತನನ್ನು ವಶಕ್ಕೆ ಪಡೆಯಲು ಬೊಮ್ಮನಹಳ್ಳಿ ಠಾಣೆಯ ನಾಲ್ವರು ಸಿಬ್ಬಂದಿ ಹೋಗಿದ್ದರು. ಪೊಲೀಸರ ಕಂಡ ಮೊಹಮ್ಮದ್‌ ಹುಸೇನ್‌, ಮನೆಯ ನಾಲ್ಕನೇ ಮಹಡಿಯಿಂದ ಜಿಗಿದು, ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಜಿಗಿಯುವಾಗ ಅರೆ ಬೆತ್ತಲಾಗಿದ್ದ ಎಂದು ಹೇಳಲಾಗಿದೆ. ಮೊಹಮ್ಮದ್‌ ಹುಸೇನ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಬಳಿಕ ಕುಟುಂಬ ಸದಸ್ಯರಿಗೆ ಹತ್ತಾಂತರಿಸಲಾಗುತ್ತದೆ ಎಂದು ಪೊಲೀಸರು ಹೇಳಿದರು. ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಪೊಲೀಸರೇ ಹಲ್ಲೆ ನಡೆಸಿ ತಮ್ಮ ಪುತ್ರ ನನ್ನು ಕೊಂದಿದ್ದಾರೆ’ ಎಂದು ಮೊಹಮದ್‌ ಹುಸೇನ್‌ ಪೋಷಕರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಸ್ಥಳೀಯ ಶಾಸಕ ಸತೀಶ್‌ ರೆಡ್ಡಿ ಭೇಟಿ ನೀಡಿದರು.

Sneha Gowda

Recent Posts

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

13 mins ago

ಪ್ರಜ್ವಲ್ ರೇವಣ್ಣನ ಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು; ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ…

18 mins ago

2ನೇ ಹಂತದ ಲೋಕಸಭೆ ಚುನಾವಣೆ: ಮತ ಚಲಾಯಿಸಿದ ಬಿಎಸ್​ ವೈ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​…

31 mins ago

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ…

40 mins ago

30 ಕೋಟಿ ರೂ. ನಗದು ಪತ್ತೆ: ಸಚಿವ ಆಲಂಗೀರ್​ ಆಪ್ತ ಸಂಜೀವ್​ ಲಾಲ್ ಬಂಧನ

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್​ನ ಸಚಿವ ಆಲಂಗೀರ್ ಆಲಮ್​ ಆಪ್ತ ಸಂಜೀವ್​ ಲಾಲ್ ಅವರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್…

1 hour ago

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

2 hours ago