ಬೆಂಗಳೂರು: ಭಾರತೀಯರಿಗೆ ಚಿನ್ನದ ಮೇಲೆ ಅತಿಯಾದ ಪ್ರೀತಿ. ಹೀಗಾಗಿ ಚಿನ್ನ ಖರೀದಿ ದೇಶದಲ್ಲಿ ಒಂದು ಸಂಪ್ರದಾಯವಾಗಿಯೇ ಮುಂದುವರಿದಿದೆ. ಈ ನಿಟ್ಟಿನಲ್ಲಿ ಇಂದು ದೇಶದಲ್ಲಿ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಎಂದು ತಿಳಿದುಕೊಳ್ಳೋಣ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತಷ್ಟು ಇಳಿದಿವೆ. ಭಾರತ ಹಾಗೂ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆ ಆಗಿದೆ. ಸಿಂಗಾಪುರ ಮೊದಲಾದ ಕೆಲ ದೇಶಗಳಲ್ಲಿ ಮಾತ್ರ ತುಸು ಏರಿದೆ. ಮಲೇಷ್ಯಾದಲ್ಲಿ ಕೆಲ ವಾರದಿಂದಲೂ ಚಿನ್ನದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಇಳಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,240 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,175 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,490 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ