News Karnataka Kannada
Monday, April 29 2024
ಬೆಂಗಳೂರು ನಗರ

ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್‌ ಸಂಪರ್ಕ: ಎಚ್‌ಡಿಕೆ ವಿರುದ್ಧ ಎಫ್‌ಐಆರ್‌

FIR against HDK for power connection to Dipalankara
Photo Credit : News Kannada

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಜೆಪಿ ನಗರದ ಮನೆಯ ದೀಪಾಲಂಕಾರಕ್ಕೆ ಅಕ್ರಮವಾಗಿ ಕಂಬದಿಂದ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಎಫ್‌ಐಆರ್‌ ದಾಖಲಾಗಿದೆ. ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದಡಿ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ, 71ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಬೆಸ್ಕಾಂ ಜಾಗೃತ ದಳದ ಸಿಬ್ಬಂದಿ ಎಫ್​ಐಆರ್ ಪ್ರತಿಯನ್ನು ಸಲ್ಲಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು