ಬೆಂಗಳೂರು ನಗರ

ಎಚ್‌ಡಿಕೆ ಮನೆ ಗೋಡೆಗೆ ಪೋಸ್ಟರ್‌ ಅಂಟಿಸಿದ್ದ ಪ್ರಕರಣ: ಎಫ್‌ಐಆರ್‌ ದಾಖಲು

ಬೆಂಗಳೂರು: ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಅಕ್ರಮವಾಗಿ ಮನೆ ಅಲಂಕಾರಕ್ಕಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ ಎಂಬ ವಿಚಾರವನ್ನು ಕಾಂಗ್ರೆಸ್‌ ಎಕ್ಸ್‌ ನಲ್ಲಿ ಹಂಚಿಕೊಂಡಿತ್ತು. ಬಳಿಕ ಅವರ ಮನೆ ಗೋಡೆಗೆ ವಿದ್ಯುತ್‌ ಕಳ್ಳ ಎಂಬ ಪೋಸ್ಟರ್‌ ಅಳವಡಿಸಲಾಗಿತ್ತು. ಈಗ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್‌ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಅವರು ನೀಡಿದ ದೂರಿನ ಮೇರೆಗೆ ಬಿಂದು, ನವೀನ್‌ಗೌಡ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ನವೆಂಬರ್‌ 14ರಂದು ರಾತ್ರಿ 10 ಗಂಟೆ ಸುಮಾರಿಗೆ ಆಟೋದಲ್ಲಿ ಬಂದ ನಾಲ್ವರು ಜೆಡಿಎಸ್‌ ಪಕ್ಷ ಹಾಗೂ ಪಕ್ಷದ ಮುಖಂಡರ ವಿರುದ್ಧ ಘೋಷಣೆ ಕೂಗಿದ್ದಾರೆ. ಪ್ರಶ್ನಿಸಲು ಮುಂದಾದ ಭದ್ರತಾ ಸಿಬ್ಬಂದಿ ಮಹಾದೇವ್‌ ರುವಾನಿ ಅವರನ್ನು ನಿಂದಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ಧಾರೆ. ನವೀನ್‌ಗೌಡ ಹಾಗೂ ಬಿಂದು ಸಾಮಾಜಿಕ ಜಾಲತಾಣದಲ್ಲೂ ಕೀಳು ರೀತಿಯಲ್ಲಿ ಪೋಸ್ಟ್‌ ಹರಿಯಬಿಡುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ್ದ ಪೊಲೀಸರು ಮಂಗಳವಾರ ರಾತ್ರಿಯೇ ಪೋಸ್ಟರ್‌ ತೆರವುಗೊಳಿಸಿದ್ದರು.

Gayathri SG

Recent Posts

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

22 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

45 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago