News Karnataka Kannada
Saturday, May 04 2024
ಬೆಂಗಳೂರು ನಗರ

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ, 10 ಮಂದಿಗೆ ಗಾಯ

Fire breaks out at BBMP office, 10 injured
Photo Credit : News Kannada

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಘಟನೆಯಲ್ಲಿ 8 ರಿಂದ 10 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ. ಬೆಂಕಿ ದುರ್ಘಟನೆಯನ್ನು ಗಾಯಗೊಂಡ ಹತ್ತು ಮಂದಿಯನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗಂಭೀರವಾಗಿ ಸುಟ್ಟ ಬಿಬಿಎಂಪಿ ನೌಕರನಿಗೆ ಸೆಂಟ್ ಮಾರ್ಥಾಸ್​ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಕ್ಟೋರಿಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಬೆಂಕಿ ಹತ್ತಿಕೊಂಡ ಮಾಹಿತಿ ತಿಳಿದ ತಕ್ಷಣ ಬಿಬಿಎಂಪಿ ನೌಕರರು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು