ಬೆಂಗಳೂರು: ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದೆ.
ಹಿಂಬದಿಯಿಂದ ವೇಗವಾಗಿ ಬಂದ ಬಸ್ ಡಿಕ್ಕಿಯಾಗಿ ಫುಡ್ ಡೆಲಿವರಿ ಬಾಯ್ ಬಸವರಾಜ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ನೈಟ್ ಡ್ಯೂಟಿಯಲ್ಲಿದ್ದ ಫುಡ್ ಡೆಲಿವರಿ ಬಾಯ್ ಬಸವರಾಜು, ಮೈಸೂರು ರಸ್ತೆ ಕಡೆಗೆ ಡೆಲಿವರಿಗೆಂದು ತೆರಳುತಿದ್ದರು. ಇದೇ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಅತಿವೇಗವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಮುಂದೆ ಚಲಿಸುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ.
ಸದ್ಯ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.