ಬೆಂಗಳೂರು ನಗರ

ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆ: 2035 ಹೆಕ್ಟೇರ್ ಭೂಮಿಗೆ ನೀರಾವರಿ- ಗೋವಿಂದ ಕಾರಜೋಳ

ಬೆಳಗಾವಿ ; ಬಾಗಲಕೋಟ ಜಿಲ್ಲೆ ಜಮಖಂಡಿ ತಾಲ್ಲೂಕಿನ ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 216 ಕೋಟಿ ರೂ.ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಈ ಯೋಜನೆಯಿಂದ ಎಂಟು ಗ್ರಾಮಗಳ 2035 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಆನಂದ ಸಿದ್ದು ನ್ಯಾಮಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕಾರಜೋಳ ಅವರು, ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದೆಂದು 2018-19 ರ ಆಯವ್ಯಯ ಭಾಷಣದಲ್ಲಿ ಘೋಷಣೆ ಮಾಡಲಾಗಿತ್ತು. ಈ ಯೋಜನೆಯ 216.50 ಕೋಟಿ ರೂ.ಮೊತ್ತದ ವಿಸ್ತೃತ ಯೋಜನಾ ವರದಿಯು ಆಡಳಿತಾತ್ಮಕ ಅನುಮೋದನೆಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಸ್ವೀಕೃತವಾಗಿದ್ದು,ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅವರು ವಿವರಿಸಿದರು.

ಈ ಯೋಜನೆಯಿಂದ ಜಮಖಂಡಿ ತಾಲೂಕಿನ ಮರೆಗುದ್ದಿ, ಹುಲ್ಯಾಳ, ಸಿದ್ದಾಪುರ, ಜಮಖಂಡಿ, ಕೊಣ್ಣೂರ, ಬುದ್ನಿಹುಣಸಿಕಟ್ಟಿ , ಗಣಿ ಹಾಗೂ ಮುಧೋಳ ತಾಲೂಕಿನ ಶಿರೋಳ ಮತ್ತು ಬುದ್ನಿ ಪಿ.ಎಂ.ಗ್ರಾಮಗಳ ಸುಮಾರು 2035 ಹೆಕ್ಟೇರ್ ಜಮೀನುಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಕೊಣ್ಣೂರು, ಸಿದ್ದಾಪುರ, ಜಮಖಂಡಿ ಮತ್ತು ಹುಣಸಿಕಟ್ಟೆ ಕೆರೆಗಳನ್ನು ತುಂಬಿಸಲು ಯೋಜಿಸಲಾಗಿದೆ ಎಂದು ಸಚಿವರು ಸದನದಲ್ಲಿ ವಿವರಿಸಿದರು.

ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಶಾಸಕ ಆನಂದ ನ್ಯಾಮಗೌಡ ಅವರು ಸಚಿವರಲ್ಲಿ ಮನವಿ ಮಾಡಿದರು.

Sneha Gowda

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

3 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

15 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

20 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

34 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

56 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

59 mins ago