ದಾವಣಗೆರೆ

ಕರೆಂಟ್‌ ಬಿಲ್‌ ಕಟ್ಟದಂತೆ ಊರೆಲ್ಲ ಡಂಗುರ ಸಾರಿದ ದಾವಣಗೆರೆಯ ಗೋಣಿವಾಡ ಗ್ರಾಮಸ್ಥರು

ಬೆಂಗಳೂರು: ಕಾಂಗ್ರೆಸ್‌ ಚುನಾವಣೆ ವೇಳೆ ನೀಡಿದ್ದ ಉಚಿತ ಭರವಸೆಗಳು ಈಗ ಅದೇ ಪಕ್ಷದ ಮುಖಂಡರಿಗೆ ಮಗ್ಗುಲ ಮುಳ್ಳಾಗಿದೆ. ದಿನಕ್ಕೊಂದು ಕಡೆ ಹೊಡೆದಾಟ ಬಡಿದಾಟ ಆರಂಭವಾಗಿದೆ. ವಿದ್ಯುತ್‌ ಬಿಲ್‌ ನೀಡುವುದಿಲ್ಲ ಎಂದು ಬಿಲ್‌ ಸಂಗ್ರಹಕ್ಕೆ ಬಂದ ಇಲಾಖೆ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದ ಘಟನೆಗಳೂ ನಡೆದಿವೆ.

ಅದೇರೀತಿ ಮಹಿಳೆಯರು ಉಚಿತ ಬಸ್‌ ಪ್ರಯಾಣಕ್ಕಾಗಿ ನಿರ್ವಾಹಕರೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿದ್ದು, ನಡೆದಿದೆ. ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಸ್ಪಷ್ಟ ಸೂಚನೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ. ಇದೀಗ ಜನರೆ ಸಾಮೂಹಿಕವಾಗಿ ಡಂಗುರ ಸಾರುವ ಮೂಲಕ ಕೈ ಸರ್ಕಾರದ ಉಚಿತ ಯೋಜನೆ ಸ್ವಯಂ ಅನುಷ್ಠಾನಕ್ಕೆ ಮುಂದಾಗಿದ್ದಾರೆ.

ದಾವಣಗೆರೆ ತಾಲ್ಲೂಕಿನ ಗೋಣಿವಾಡದಲ್ಲಿ ತಮಟೆ ಬಾರಿಸಿ, ಕರೆಂಟ್ ಬಿಲ್ ಕಟ್ಟದಂತೆ ಡಂಗೂರ ಸಾರಲಾಗಿದೆ. ಈ ಮೂಲಕ ಜನರಿಗೆ ವಿದ್ಯುತ್ ಬಿಲ್ ಕಟ್ಟದಂತೆ ಮಾಹಿತಿ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಉಚಿತ ವಿದ್ಯುತ್ ನೀಡುವಂತೆ ಹೇಳಿದ್ದಾರೆ. ಹೀಗಾಗಿ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟದಿರಲು ನಿರ್ಧಾರ ಮಾಡಿದ್ದಾರೆ ಎಂದು ಡಂಗೂರ ಸಾರಲಾಗಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರೆಂಟಿ ಯೋಜನೆ ಜಾರಿ ಮಾಡುವುದಾಗಿ ಹೇಳಿ ಇದುವರೆಗೂ ಜಾರಿ ಮಾಡಿಲ್ಲ. ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಮಹಿಳೆಯರು ಟಿಕೆಟ್ ಪಡೆಯದೆ ಪ್ರಯಾಣಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈಗಾಗಲೇ ಕರೆ ಕೊಟ್ಟಿದ್ದಾರೆ.

ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಬಿಲ್ ಕಟ್ಟಬೇಡಿ. ಹೆಚ್ಚುವರಿಯಾಗಿ ಬಳಸಿದ್ದರೆ ಮಾತ್ರ ಬಿಲ್​ ಕಟ್ಟಿ, ಗ್ಯಾರಂಟಿ ಕಾರ್ಡ್​ನಲ್ಲಿ ಕಾಂಗ್ರೆಸ್​ನವರು ಎಲ್ಲಿಯೂ ಷರತ್ತುಗಳು ಅನ್ವಯ ಅಂತ ನಮೂದಿಸಿಲ್ಲ ಎಂದು ಸಂಸದ ಪ್ರತಾಪ್​ ಸಿಂಹ ತಿಳಿಸಿರುವುದು ಜನರಿಗೆ ಬೆಂಬಲ ನೀಡಿದಂತಾಗಿದೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago