ಬೆಂಗಳೂರು: ಜ. 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಾಲ ರಾಮ(ರಾಮ ಲಲ್ಲಾ)ನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಮ ಪ್ರಾಣ ಪ್ರತಿಷ್ಠಾಪನೆ ದಿನದಿಂದು ರಾಜ್ಯದಲ್ಲಿ ರಜೆ ನೀಡಬೇಕೆಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡಾ ಇದೇ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಆದರೆ ಮನವಿ ಪತ್ರವನ್ನು ನಾನು ಇನ್ನೂ ನೋಡಿಲ್ಲ. ನೋಡುತ್ತೇನೆ ಎಂದು ಉತ್ತರಿಸಿದ್ದಾರೆ.