ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಕೋರೋನಾ ಸೋಂಕು ತಗುಲಿದೆ. ಪರೀಕ್ಷೆಯಲ್ಲಿ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊವಿಡ್ ಪಾಸಿಟಿವ್ ದೃಢಪಟ್ಟಿರುವುದರಿಂದ ಥಾವರ್ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.