News Karnataka Kannada
Friday, April 19 2024
Cricket
ಬೆಂಗಳೂರು ನಗರ

ಜನರ ಜೇಬಿಗೆ ಕೈ ಹಾಕಿ ಕಿತ್ತುಕೊಳ್ಳಬೇಕು ಎಂಬುದು ಗುಜರಾತ್ ಮಾದರಿ: ಸಿಎಂ

Gujarat model to put hands in people's pockets and snatch them away: CM
Photo Credit : Facebook

ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಿಎಂ ಬಿಜೆಪಿ ವಿರುದ್ಧ ಹರಿಹಾಯ್ದರು. ಬಿಜೆಪಿಯವರು ವಿಶ್ವಗುರುವಿನ ಬಗ್ಗೆ ಭಾಷಣ ಮಾಡುತ್ತಾರೆ. ಆ ವಿಶ್ವಗುರುವಿಗೆ ತಮ್ಮ ಪಕ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ಕೇವಲ ಭಾಷಣದಿಂದ ನಾಡಿನ, ದೇಶದ ಜನರ ಸಂಕಷ್ಟ ಪರಿಹಾರ ಆಗುವುದಿಲ್ಲ ಎನ್ನುವ ಪಾಠವನ್ನು ವಿಶ್ವಗುರುವಿಗೆ ಜನ ಕಲಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಬಜೆಟ್​ ಈಡೇರಿಸಿದ್ದೇವೆ. ಬಜೆಟ್​ನಲ್ಲಿ ಹೇಳಿದ್ದಕ್ಕೆ ಹಣ ಕೊಟ್ಟು ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನು ಆಗಲೇ ಜಾರಿ ಮಾಡಿದ್ದೇವೆ. ನಾವು ಹೇಳಿದ್ದನ್ನು ಮಾಡಿದ್ದೇವೆ. ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂದರು. ಆದರೆ ತಾವು ಹೇಳಿದಂತೆ ನಡೆದುಕೊಳ್ಳಲಿಲ್ಲ. ಹೀಗಾಗಿ ಬಿಜೆಪಿಯ ಟೊಳ್ಳುತನ, ಬೇಜವಾಬ್ದಾರಿತನ, ನಕಲಿತನ ನಾಡಿನ ಜನರೆದುರು ಬೆತ್ತಲಾಗಿದೆ ಎಂದು ಟೀಕಿಸಿದ್ದಾರೆ.

ಗುಜರಾತ್ ಮಾದರಿ ಭಾಷಣ ಕೊಚ್ಚುತ್ತಿದ್ದ ಬಿಜೆಪಿಯವರು ಕರ್ನಾಟಕದ ಗ್ಯಾರಂಟಿ ಮಾದರಿಗಳಿಂದ, ಕರ್ನಾಟಕದ ಅಭಿವೃದ್ಧಿ ಮಾದರಿಗೆ ಹೆದರಿದ್ದಾರೆ. ದುಡಿಯುವ ಜನರ ಜೇಬಿನಲ್ಲಿ ಹಣ ಇರಬೇಕು, ಶ್ರಮಿಕ ಜನರ ಜೇಬಿಗೆ ಹಣ ಹಾಕಬೇಕು ಎನ್ನುವುದು ಕರ್ನಾಟಕ ಮಾದರಿ. ಜನರ ಜೇಬಿಗೆ ಕೈ ಹಾಕಿ ಕಿತ್ತುಕೊಳ್ಳಬೇಕು ಎನ್ನುವುದು ಬಿಜೆಪಿಯವರ ಗುಜರಾತ್ ಮಾದರಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು