News Karnataka Kannada
Saturday, May 04 2024
ಬೆಂಗಳೂರು ನಗರ

ಕೋಟಿ ಚನ್ನಯ್ಯ ಥೀಂ ಪಾರ್ಕ್ ಐದು ಕೋಟಿ ರೂ. ಕೊಟ್ಟಿದ್ದು ಎಲ್ಲಿದೆ: ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದಲ್ಲಿ ಬಂಡಾಯ ಧ್ವನಿಯಾಗಿ ಗುರುತಿಸಿಕೊಂಡಿರುವ ಬಿ.ಕೆ ಹರಿಪ್ರಸಾದ್‌ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ನಾರಾಯಣ ಗುರು ಅಧ್ಯಯನ ಪೀಠ ಈಗಾಗಲೇ ಪ್ರಾರಂಭ ಆಗಿದೆ. ಅದನ್ನು ಪ್ರಾರಂಭಿಸಬೇಕು ಎಂದು ಹೇಳಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಯಾರೋ ತಪ್ಪುದಾರಿಗೆ ಎಳೆದಿದ್ದಾರೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
Photo Credit : News Kannada

ಬೆಳಗಾವಿಯಲ್ಲಿ ಮಾತನಾಡಿದ ಅವರು ನನ್ನ ಅನುದಾನದಲ್ಲಿ ಐವತ್ತು ಲಕ್ಷ ಕೊಟ್ಟು ಪ್ರಾರಂಭ ಮಾಡಿದ್ದೇನೆ. ಅರ್ಧದಲ್ಲಿ ನಿಂತಿದ್ದು ಪೂರ್ಣ ಮಾಡಲು ಎರಡು ಕೋಟಿ ಕೊಡಿ ಎಂದು ಕೇಳಿದ್ದೇನೆ. ಎರಡು ವರ್ಷದಿಂದ ಓಡಾಡುತ್ತಿದ್ದೇನೆ. ಕೋಟಿ ಚನ್ನಯ್ಯ ಥೀಂ ಪಾರ್ಕ್ ಗೆ ಐದು ಕೋಟಿ ಕೊಟ್ಟಿದ್ದೇವೆ ಎಂದಿದ್ದಾರೆ. ಅದು ಎಲ್ಲಿ ಇದೆ ಎಂದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಬಿಲ್ಲವ ಈಡಿಗರ ಸಮಾವೇಶ ನಡೆದ ವಿಚಾರವಾಗಿ ಮಾತನಾಡಿದ ಬಿಕೆ ಹರಿಪ್ರಸಾದ್, ಸಮುದಾಯ ಒಡೆಯಲು ಈ ಸಮಾವೇಶ ನಡೆದಿದೆ ಎಂಬ ದಾಟಿಯಲ್ಲಿ ನಾನು ಹೇಳುತ್ತಿಲ್ಲ. ರಾಹುಲ್‌ ಗಾಂಧಿ ಹಿಂದುಳಿದ ವರ್ಗಗಳ ಜಾತಿ ಗಣತಿ ಆಗಬೇಕು ಎಂದಿದ್ದಾರೆ. ಯಾವುದೇ ಸಮುದಾಯ ಒಡೆಯುವ ಕೆಲಸ ಆಗಬಾರದು. ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದರು. ಸಮಾವೇಶದಲ್ಲಿ ಸಮಾಜದ ಎಲ್ಲಾ ಸ್ವಾಮೀಜಿಗಳು ಬಂದರೆ ಒಗ್ಗಟ್ಟು ಸಾಧ್ಯ. ಆದರೆ ಎಲ್ಲಾ ಸ್ವಾಮೀಜಿಗಳು ಇರಲಿಲ್ಲ, ಇದು ತಪ್ಪು ಎಂಬ ಅಭಿಪ್ರಾಯ ಸ್ವಾಮೀಜಿಗಳು‌ ವ್ಯಕ್ತಪಡಿಸಿದ್ದರು. ಅವರ ಕೋರಿಕೆಯ ಮೇರೆಗೆ ನಾನು ಸಮಾವೇಶಕ್ಕೆ‌ ಹೋಗಿಲ್ಲ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಸಮಾವೇಶದಲ್ಲಿ ಏನು ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು