News Karnataka Kannada
Friday, May 03 2024
ಬೆಂಗಳೂರು ನಗರ

ಮುರುಘಾ ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿ ನೇಮಿಸಿದ ಹೈಕೋರ್ಟ್‌

PSI recruitment case: HC says re-examination is appropriate
Photo Credit : Wikimedia

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಕರ್ನಾಟಕ ಸರ್ಕಾರದ ಕ್ರಮವನ್ನು ರದ್ದು ಪಡಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಚ್. ಏಕನಾಥ್ ಎಂಬುವರು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಮತ್ತು ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠ ತಾತ್ಕಾಲಿಕ ಆಡಳಿತಾಧಿಕಾರಿ ನೇಮಿಸಿ ಆದೇಶಿಸಿದೆ. ಅಲ್ಲದೆ, ಮಠದ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರು ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀರಿಸಲು ನ್ಯಾಯಪೀಠ ಸೂಚನೆ ನೀಡಿದೆ.

ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅಂದಿನ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್. ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ವಸ್ತ್ರದ 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು