News Karnataka Kannada
Saturday, May 11 2024
ಬೆಂಗಳೂರು ನಗರ

ಎಚ್‌.ಡಿ.ರೇವಣ್ಣಗೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

I will bring the JD(S) B form from Hassan.
Photo Credit : News Kannada

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಶಾಸಕ ಹೆಚ್​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್​ ಜಾರಿಗೆ ಆದೇಶಿಸಿದೆ.

ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್​ ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್‌.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು