ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಳೆದ 4 ದಿನಗಳ ಹಿಂದೆ ಅನಾರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ದೇವೇಗೌಡರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ.
ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ದೇವೇಗೌಡರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು, ಸದ್ಯ ಅವರು ಚೇತರಿಸಿಕೊಂಡಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.