News Karnataka Kannada
Friday, May 17 2024
ಬೆಂಗಳೂರು ನಗರ

ಬೆಂಗಳೂರು: ಹಿಂದಿ ದಿವಸ ಆಚರಣೆ ಖಂಡಿಸಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಭಟನೆ

HD Kumaraswamy protests against Hindi Diwas celebrations in Bengaluru
Photo Credit : G Mohan

ಬೆಂಗಳೂರು: ಕೇಂದ್ರ ಸರಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿ ದಿವಸ ಆಚರಣೆ ಖಂಡಿಸಿ ವಿಧಾನಸೌಧ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ನಡೆಸಿದ ಪ್ರತಿಭಟನೆ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಕೇಂದ್ರ ಸರಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ನೇರವಾಗಿ ಆರೋಪಿಸಿದರು ಮಾಜಿ ಮುಖ್ಯಮಂತ್ರಿಗಳು.

ಕೇಂದ್ರ ಸರ್ಕಾರದಿಂದ ಇವತ್ತು ಹಿಂದಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮ ಪಕ್ಷ ಜಾತ್ಯತೀತ ಜನತಾದಳದ ವಿರೋಧ ಇದೆ. ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ದೇಶದಲ್ಲಿ ನಾನಾ ಭಾಷೆ ಮಾತಾಡುವ ನಾಗರೀಕರು ಇದ್ದಾರೆ. ಈಗಾಗಲೇ ಅಮೃತ ಮಹೋತ್ಸವ ಮಾಡಿದ್ದೇವೆ. ಅದರೂ ಕೇಂದ್ರ ಬಿಜೆಪಿ ಸರಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

ಒಂದು ಭಾಷೆ ಒಂದು ರಾಷ್ಟ್ರ ಎಂಬ ಗೃಹ ಸಚಿವರ ಹೇಳಿಕೆ ಸರಿಯಲ್ಲ. ಕೇವಲ ಹಿಂದಿ ಒಂದು ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಓಡೆದಂತೆ. ಅವರು ಕೇಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಉತ್ತರ ಭಾರತದ ಕೆಲವು ಭಾಗದಲ್ಲಿ ಹಿಂದಿ ಇಲ್ಲ. ಅನೇಕ ರಾಜ್ಯಗಳಲ್ಲಿ ಅವರವರದೇ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೇಂದ್ರದ ನಡೆಗೆ ನಮ್ಮ ವಿರೋಧ ಇದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? ಜನ ಈಗಾಗಲೇ ನೆರೆ ಹಾವಳಿ ಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಭಾರದೆ ಹಿಂದಿ ಭಾಷೆಯ ವಿಚಾರ ಸರಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಅವರು ಕಿಡಿ ಕಾರಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು