ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸುಚನೆ ನೀಡಿದೆ. ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್ ಇರುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ, ಮುಂದಿನ ಒಂದು ವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.