News Karnataka Kannada
Monday, April 29 2024
ಬೆಂಗಳೂರು ನಗರ

ಎರಡು ದಿನಗಳ ಕಾಲ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಸಿಡಿಲು ಬಡಿದು ಭದ್ರಾವತಿಯ ಇಬ್ಬರು ಸಹೋದರರು ಬಲಿಯಾಗಿದ್ದಾರೆ. ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್ ನ ಬಳಿಯ ಗದ್ದೆಯಲ್ಲಿ ಕಟಾವು ಆಗಿದ್ದ ಭತ್ತ ಕಾಯಲು ತೆರಳಿದ್ದ ಹುಣಸೆಕಟ್ಟೆ ಜಂಕ್ಷನ್ ನಿವಾಸಿಗಳಾದ ಎಸ್.ಬೀರೇಶ (ಬೀರು) (32), ಎಸ್. ಸುರೇಶ (30) ಬಲಿಯಾದವರು.
Photo Credit : News Kannada

ಬೆಂಗಳೂರು: ನ.22ರಿಂದ 2 ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಕೆಲವೇ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು