ಬೆಂಗಳೂರು: ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿವೆ. ಈ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಸ್ಥಿತಿಯಿದೆ. ಆದರೀಗ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಡಿಸೆಂಬರ್ 1ರವರೆಗೆ ವ್ಯಾಪಕವಾಗಿ ಮಳೆ ಆಗಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರಾವಳಿಯ ಮೂರು ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ಮಳೆ ಬಿರುಸಾಗಿರಲಿದೆ.
ಉಳಿದಂತೆ ಇದೇ ಒಳನಾಡು ಭಾಗದ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿಮವೊಗ್ಗ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರು ಮಳೆ ಬರುವ ನಿರೀಕ್ಷೆಗಳು ಇವೆ.
ಇನ್ನೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಹ ಶುಕ್ರವಾರದಿಂದ ಮೂರು ದಿನ ಮಳೆ ಅಬ್ಬರಿಲಿದೆ. ಮೂರು ದಿನಗಳ ನಂತರವು ಈ ಮಳೆ ತುಸು ದುರ್ಬಲಗೊಂಡರು ಸಹಿತ ಮತ್ತೆ ಡಿಸೆಂಬರ್ 1ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.