ಬೆಂಗಳೂರು: ಕರ್ನಾಟಕದಾದ್ಯಂತ ಅಕ್ಟೋಬರ್ 02ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಮಳೆಯಾಗಲಿದೆ. ಇನ್ನುಳಿದಂತೆ ಬೀದರ್, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.