ಬೆಂಗಳೂರು: ಇಂದಿನಿಂದ ಜ. 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡದ ಮಾಣಿಯಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದೆ.