ಬೆಂಗಳೂರು: ರಾಜ್ಯದಲ್ಲಿ ಇನ್ನೂ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಗಾಳಿ ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 2 ದಿನ ಮಳೆಯಾಗಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನಲ್ಲಿಯೂ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ಮುನ್ಸೂಚನೆ ನೀಡಿದೆ.