News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಭಾರೀ ಮಳೆ

ಇಂದಿನಿಂದ ಜ. 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Photo Credit : Freepik

ಬೆಂಗಳೂರು, ಜು.30: ರಾಜ್ಯಾದ್ಯಂತ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ. ಶನಿವಾರ ಬೆಳಗ್ಗೆ 8.30ರ ತನಕ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯೊಂದಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಶನಿವಾರದಿಂದ ಭಾನುವಾರ ಬೆಳಗ್ಗೆ 8.30ರ ತನಕ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಭಾನುವಾರದಿಂದ ಸೋಮವಾರ ತನಕ ಮಳೆ ಅಬ್ಬರ ತುಸು ಕಡಿಮೆ ಇರಲಿದೆ. ಆದರೆ ಸೋಮವಾರ ಮತ್ತು ಮಂಗಳವಾರ ಮತ್ತೆ ಮಳೆ ಅಬ್ಬರಿಸಲಿದ್ದ ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು