ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.