ಚಿಕ್ಕಮಗಳೂರಿಗೆ ಹೈ ಅಲರ್ಟ್‌: 77 ಹಳ್ಳಿಗಳು ಅಪಾಯಕಾರಿ ವಲಯದಲ್ಲಿ

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ಕರ್ನಾಟಕದ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಮಳೆಗಾಲದಲ್ಲಿ ಭೂಕುಸಿತ, ವಿಪರೀತ ಮಳೆಯಿಂದ ತತ್ತರಿ, ಸಂಪರ್ಕ ಕಡಿತಗೊಂಡು, ಅಪಾರ ಜೀವ ಹಾನಿಯಾಗಿತ್ತು. ಇದೀಗ ಮತ್ತೆ ಮಳೆಗಾಲ ಕೆಲದಿನಗಳು ಬಾಕಿಯಿದೆ. ಆದರೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ.

ಹವಾಮಾನ ಇಲಾಖೆಯು ಚಿಕ್ಕಮಗಳೂರು ಜಿಲ್ಲೆಗೆ ಹೈ ಅಲರ್ಟ್ ಘೋಷಿದ್ದು, ಚಿಕ್ಕಮಗಳೂರಿನಲ್ಲಿ 47 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 77 ಹಳ್ಳಿಗಳನ್ನು “ಅಪಾಯಕಾರಿ ವಲಯ” ಎಂದು ಗುರುತಿಸಲಾಗಿದೆ. ಕಳೆದ ವರ್ಷ ಈ ಸ್ಥಳಗಳಲ್ಲಿ ಭಾರೀ ನಷ್ಟ ಅನುಭವಿಸಿದ್ದರಿಂದ ಮುನ್ನೆಚ್ಚರಿಕೆ ವಹಿಸಲು ಇಡೀ ಜಿಲ್ಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ಭೂಕುಸಿತ ಮತ್ತು ಪ್ರವಾಹದಿಂದಾಗಿ ಕೊಡಗು ಜಿಲ್ಲೆ ಐದು ವರ್ಷಗಳಿಂದ ರಾಜ್ಯದಲ್ಲಿ ಹೆಚ್ಚು ಹಾನಿಗೊಳಗಾಗಿದೆ. ಮಡಿಕೇರಿ ತಾಲ್ಲೂಕಿನಿಂದ 768 ಕುಟುಂಬಗಳ 2,681 ಜನರನ್ನು ಸ್ಥಳಾಂತರಿಸುವ ಕುರಿತು ಜಿಲ್ಲಾಡಳಿತ ಈಗಾಗಲೇ ಸರ್ಕಾರಕ್ಕೆ ವರದಿ ಕಳುಹಿಸಿದೆ. ತುರ್ತು ಪರಿಸ್ಥಿತಿಗಳಿಗೆ ಹಾಜರಾಗಲು 26 ಶಿಬಿರಗಳನ್ನು ಸ್ಥಾಪಿಸಲು ಆಡಳಿತವು ನಿರ್ಧರಿಸಿದೆ.

ಸೋಮವಾರಪೇಟೆ ತಾಲೂಕಿನಲ್ಲಿ 1,143 ಕುಟುಂಬಗಳಿಂದ 4,162 ಜನರನ್ನು ಸ್ಥಳಾಂತರಿಸಬೇಕು. 30 ಪುನರ್ವಸತಿ ಶಿಬಿರಗಳನ್ನು ಸ್ಥಾಪಿಸಬೇಕು ಎಂದು ವರದಿ ಶಿಫಾರಸು ಮಾಡಿದೆ. ಅದೇ ರೀತಿ ವಿರಾಜಪೇಟೆ ತಾಲೂಕಿನಲ್ಲಿ 582 ಕುಟುಂಬಗಳ 2,049 ಜನರನ್ನು ಸ್ಥಳಾಂತರಿಸಬೇಕಾಗಿದ್ದು, 26 ಶಿಬಿರಗಳನ್ನು ತೆರೆಯಬೇಕು ಎಂದು ಸೂಚಿಸಿದೆ.

ಈ ಪ್ರದೇಶವು ಕಳೆದ ವರ್ಷ ವಿನಾಶವನ್ನು ಎದುರಿಸಿತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ಕೊಡಗು ಜಿಲ್ಲೆಗೆ ಆಗಮಿಸುತ್ತಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ (ಏಪ್ರಿಲ್‌ನಿಂದ ಜೂನ್‌ವರೆಗೆ) ಆಸ್ತಿಪಾಸ್ತಿ ಹಾನಿಯೊಂದಿಗೆ 52 ಸಾವುಗಳು ವರದಿಯಾಗಿವೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿಕೆ ನೀಡಿದ್ದು, ತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 20,000 ಹೆಕ್ಟೇರ್‌ನಲ್ಲಿ ಬೆಳೆ ನಷ್ಟ ಹಾಗೂ 814 ಮನೆಗಳಿಗೆ ಹಾನಿಯಾಗಿದ್ದು, ಒಟ್ಟು 331 ಜಾನುವಾರು ನಷ್ಟವಾಗಿದೆ.

Gayathri SG

Recent Posts

ಫೇಕ್‌ ನ್ಯೂಸ್‌: ಕೋವಿಶೀಲ್ಡ್​ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು

ಕೊರೊನಾ ಸಂದರ್ಭದಲಲಿ ಕೋವಿಶೀಲ್ಡ್‌ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

14 mins ago

ಬಿಸಿಲಿನ ಶಾಖಕ್ಕೆ ರಾಯಚೂರಿನಲ್ಲಿ ಐವರು ಬಲಿ : ಹೊತ್ತಿ ಉರಿದ ಕಾರು

ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ…

30 mins ago

ಇಂದು (ಮೇ 04) ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು…

31 mins ago

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಬೀದಿ‌ ಕಾಳಗ : ವಿಡಿಯೋ ವೈರಲ್

ಮಂಗಳೂರಿನ ಹೊರ ವಲಯ ವಳಚ್ಚಿಲ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್…

50 mins ago

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ…

52 mins ago

ಕೇಂದ್ರ ಸಚಿವ ಭಗವಂತ ಖೂಖಾ ಒಬ್ಬ ಸುಳ್ಳಿನ ಸರ್ದಾರ : ಖಂಡ್ರೆ ಆರೋಪ

ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಖಾ ವಿರುದ್ದ ಬ್ಯಾಟಿಂಗ್ ಮಾಡಿದ್ದಾರೆ.

1 hour ago