ಬೆಂಗಳೂರು: ಮಾಜಿ ಸಿಎಂ, ಬಿಜೆಪಿ ಹಿರಿಯ ಮುಖಂಡ ಡಿ.ವಿ ಸದಾನಂದ ಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಇದೀಗ ಈ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸದಾನಂದ ಗೌಡರಿಗೆ ಕೇಂದ್ರ ಸೂಚನೆ ಕೊಟ್ಟಿದೆ. ಹೀಗಾಗಿ ಅವರು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಪಕ್ಷ ಹೇಳಿದೆ. ನೇರವಾಗಿ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ ಎಂದು ಹೇಳಿದರು.
ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲು ಆಗಲ್ಲ. ಚುನಾವಣೆಗೆ ನಿಲ್ಲಬೇಡಿ ಎಂದು ನೇರವಾಗಿ ಹೈಕಮಾಂಡ್ ಸದಾನಂದಗೌಡರಿಗೆ ಹೇಳಿದೆ ಎನ್ನುವ ಅರ್ಥದಲ್ಲಿ ಬಿಎಸ್ವೈ ಹೇಳಿದ್ದಾರೆ. ಆದ್ರೆ, ನಿವೃತ್ತಿಯಿಂದ ಯಾರ ಒತ್ತಡ ಇಲ್ಲ ಎಂದು ಸದಾನಂದಗೌಡ ಹೇಳಿದ್ದಾರೆ.