ಬೆಂಗಳೂರು: ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳುವ ಮೂಲಕ ಆಕ್ರೋಶಕ್ಕೆ ಗುರಿಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ನೋಟಿಸ್ ಹಿಂಪಡೆಯಲು ಮುಂದಾಗಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡುವುದಾಗಿ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಈ ಬಗ್ಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಸ್ಥಳೀಯ ತಹಶೀಲ್ದಾರ್ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ. ಅದನ್ನು ಹಿಂಪಡೆಯುತ್ತೇವೆ ಎಂದರು.