News Karnataka Kannada
Friday, May 17 2024
ಬೆಂಗಳೂರು ನಗರ

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್​: ಎಫ್​ಐಆರ್​ ದಾಖಲು

ಇತ್ತೀಚೆಗೆ ಬಾಂಬ್ ಬೆದರಿಕೆ ಪ್ರಕರಣದ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿದೆ.
Photo Credit : News Kannada

ಬೆಂಗಳೂರು: ಇತ್ತೀಚೆಗೆ ಬಾಂಬ್ ಬೆದರಿಕೆ ಪ್ರಕರಣದ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಈ ಬಗ್ಗೆ ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು