News Karnataka Kannada
Tuesday, April 30 2024
ಬೆಂಗಳೂರು ನಗರ

ಬೆಂಗಳೂರು: ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹಸಚಿವ ಅರಗ ಜ್ಞಾನೇಂದ್ರ

Home Minister Araga Jnanendra visits Central Jail
Photo Credit : Twitter

ಬೆಂಗಳೂರು: ಹಿಂದೂ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಜೈಲಿನಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ ಅನ್ನೋ ಆರೋಪದ ಬೆನ್ನಲ್ಲೆ ಗೃಹಸಚಿವ ಅರಗ ಜ್ಞಾನೇಂದ್ರ ಅವರು ಕೇಂದ್ರ ಕಾರಾಗೃಹಕ್ಕೆ ದಿಡೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಹರ್ಷನ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳು ಲಭ್ಯವಾಗುತ್ತಿದ್ದು, ಹಂತಕರು ಜೈಲಿನಿಂದಲೇ ಹಲವು ಡೀಲ್ ಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಎನ್ನಲಾಗಿತ್ತು.

ಈ ಹಿನ್ನೆಲೆಯಲ್ಲಿ ಗೃಹ ಸಚಿವರು ದಿಢೀರ್ ಆಗಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಜೈಲಿನಲ್ಲಿದ್ದ ಆರೋಪಿಗಳಿಗೆ ನೇರವಾಗಿ ಪ್ರಶ್ನಿಸಿರುವ ಗೃಹ ಸಚಿವರು ಮೊಬೈಲ್ ಫೋನ್ ಕೈಗೆ ಸಿಕ್ಕಿದ್ದು ಹೇಗೆ ಎಂದು ಕೇಳಿದ್ದಾರೆ.

ಇದೇ ವೇಳೆ ಜೈಲಿನಲ್ಲಿ ಅಕ್ರಮ ಚಟುವಟಿಕೆ ಬಗ್ಗೆ ವರದಿ ಹಿನ್ನೆಲೆಯಲ್ಲಿ ಕಾರಾಗೃಹದ ಹೈಸೆಕ್ಯೂರಿಟಿ ಬ್ಯಾರಕ್ ಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು